Tuesday, October 4, 2016

ದಸರಾ ಹಬ್ಬದ ಪ್ರಯುಕ್ತ ಕೆಎಸ್ಆರ್ಟಿಸಿ ಸೌಲಭ್ಯ ಪ್ರವಾಸಿಗರಿಗೆ ವಿಶೇಷ ಸಾರಿಗೆ

ಬೆಂಗಳೂರು: (kannadaevision.in)ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ದಸರಾ ಮಹೋತ್ಸವದ ಅಂಗವಾಗಿ ರಾಜ್ಯದ ಹಾಗೂ ದೇಶದ ವಿವಿಧ ಕಡೆಗಳಿಂದ ದಸರಾ ವೀಕ್ಷಣೆಗೆ ಮೈಸೂರು ನಗರಕ್ಕೆ ಬರುವ ಪ್ರವಾಸಿಗರಿಗೆ ಹೆಚ್ಚುವರಿ ಬಸ್ಸುಗಳನ್ನು ಒಳಗೊಂಡ  ವಿಶೇಷ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ.


ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್‌ 7ರಿಂದ 10ರವರೆಗೆ ಬೆಂಗಳೂರಿನಿಂದ ರಾಜ್ಯದ ಮತ್ತು ಅಂತರ ರಾಜ್ಯದ ವಿವಿಧ ಸ್ಥಳಗಳಿಗೆ 1500ಕ್ಕೂ ಹೆಚ್ಚು ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.


ರಾಜ್ಯದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ಮಂಗಳೂರು, ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಕಾರವಾರ, ಬಳ್ಳಾರಿ, ಹೊಸಪೇಟೆ, ಕಲಬುರ್ಗಿ, ರಾಯಚೂರು ಮುಂತಾದ ಸ್ಥಳಗಳಿಗೆ ಹಾಗೂ ನೆರೆ ರಾಜ್ಯಗಳಲ್ಲಿನ ಹೈದರಾಬಾದ್, ಚೆನ್ನೈ, ಊಟಿ, ಕೊಡೈಕೆನಾಲ್, ಸೇಲಂ, ತಿರುಚಿನಾಪಳ್ಳಿ, ಮಧುರೈ, ತಿರುಚಿ, ಪಣಜಿ, ಶಿರಡಿ, ಮುಂಬೈ, ಎರ್ನಾಕುಲಂ, ಪಾಲ್ಗಾಟ್, ತಿರುವನಂತಪುರ ಸ್ಥಳಗಳಿಗೆ ವಿಶೇಷ ಬಸ್ಸುಗಳು ಸಂಚರಿಸುತ್ತವೆ.


ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನ ಕಾಯ್ದಿರಿಸುವ ಸೌಲಭ್ಯ ಕಲ್ಪಿಸಲಾಗಿದೆ. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್‌ ಕಾಯ್ದಿರಿಸಿದಲ್ಲಿ ಶೇ 5ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್‌ ಒಟ್ಟಿಗೆ ಕಾಯ್ದಿರಿಸಿದರೆ ಪ್ರಯಾಣ ದರದಲ್ಲಿ ಶೇ 10ರಷ್ಟು ರಿಯಾಯಿತಿ ನೀಡಲಾಗುವುದು.


ಸಂಚಾರ ಮಾಡುವ ಹೆಚ್ಚುವರಿ ಬಸ್‌ಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ನಿಗಮದ ವೆಬ್‌ಸೈಟ್‌ನಲ್ಲಿ ಒದಗಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಮೈಸೂರು ಸುತ್ತಾಟಕ್ಕೆ ‘ದರ್ಶಿನಿ’
ಮೈಸೂರಿಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ ಒದಗಿಸಿರುವ ವಿಶೇಷ ಬಸ್‌ಗಳ ವ್ಯವಸ್ಥೆ ಹೀಗಿದೆ. 

ಗಿರಿದರ್ಶಿನಿ:  ಬಂಡೀಪುರ, ಗೋಪಾಲಸ್ವಾಮಿ ಬೆಟ್ಟ, ಬಿಳಿಗಿರಿರಂಗನ ಬೆಟ್ಟ, ನಂಜನಗೂಡು ಮತ್ತು ಚಾಮುಂಡಿ ಬೆಟ್ಟಕ್ಕೆ ಪ್ರಯಾಣ ದರ ವಯಸ್ಕರಿಗೆ ₹350, ಮಕ್ಕಳಿಗೆ ₹175 ದರ ನಿಗದಿಪಡಿಸಲಾಗಿದೆ.


ಜಲದರ್ಶಿನಿ:  ಗೋಲ್ಡನ್‌ಟೆಂಪಲ್ (ಬೈಲಕುಪ್ಪೆ), ದುಬಾರೆ ಅರಣ್ಯ ನಿಸರ್ಗಧಾಮ, ರಾಜಾಸೀಟ್, ಹಾರಂಗಿ ಜಲಾಶಯ ಹಾಗೂ ಕೆ.ಆರ್.ಎಸ್.ಗೆ ಪ್ರಯಾಣ ದರ ವಯಸ್ಕರಿಗೆ ₹375 ಮತ್ತು ಮಕ್ಕಳಿಗೆ ₹190 ದರ ನಿಗದಿಪಡಿಸಲಾಗಿದೆ.


ದೇವದರ್ಶಿನಿ: ನಂಜನಗೂಡು, ಮುಡುಕುತೊರೆ, ತಲಕಾಡು, ಸೋಮನಾಥಪುರ, ಶ್ರೀರಂಗಪಟ್ಟಣ (ಪ್ರಯಾಣದರ ವಯಸ್ಕರಿಗೆ ₹275, ಮಕ್ಕಳಿಗೆ ₹140 ದರವನ್ನು ನಿಗದಿಪಡಿಸಲಾಗಿದೆ. ಈ ಬಸ್ಸುಗಳು ಬೆಳಿಗ್ಗೆ ಮೈಸೂರಿನಿಂದ ಹೊರಟು ಮೇಲ್ಕಂಡ ವಿವಿಧ ಸ್ಥಳಗಳನ್ನು ಸಂದರ್ಶಿಸಿದ ನಂತರ ಸಾಯಂಕಾಲ ಮೈಸೂರಿಗೆ ವಾಪಸ್ಸಾಗುತ್ತವೆ.
keyword: mysore-dasara-special-bus-service

ಕನ್ನಡ ಚಿಂತನೆ ಹಾಗೂ "ಸೀತಾಂತರಾಳ"


ಕಾಸರಗೋಡು:(kannadaevision.in)ಕನ್ನಡ ಅಭಿವೃದ್ದಿ ಪ್ರಾಧಿಕಾರ ಬೆಂಗಳೂರು ಹಾಗೂ ಅಪೂರ್ವಕಲಾವಿದರು ಕಾಸರಗೋಡು ಇದರ ಸಹಯೋಗದಲ್ಲಿ ದಿನಾಂಕ: 08-10-2016 ನೇ ಶನಿವಾರ, ಅಪರಾಹ್ನ 2.00 ಗಂಟೆಗೆ, ಪಿಲಿಕುಂಜೆಯ ಮುನ್ಸಿಪಲ್ ಕಾನ್ಫರೆನ್ಸ್ ಹಾಲ್ನಲ್ಲಿ ಜರಗಲ್ಲಿದೆ. ಮುಖ್ಯಅಥಿತಿಯಾಗಿ ಡಿ.ಕೆ.ರವಿಕುಮಾರ್(ಸಹಾಯಕ ನಿದರ್ೆಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ,ಬೆಂಗಳೂರು). ಹಾಗೂ ಅದ್ಯಕ್ಷರಾಗಿ ಶ್ರೀಮತಿ ಭಾರತಿಬಾಬು(ಕನರ್ಾಟಕ ನಾಟಕ ಅಕಾಡೆಮಿ ರಾಜ್ಯ ಪ್ರಶಸ್ತಿ ವಿಜೇತ ಕಲಾವಿದೆ) ಇವರು ಭಾಗವಹಿಸಲ್ಲಿದ್ದಾರೆ. ಶಶಿಧರ ಶೆಟ್ಟಿ(ಹೆಚ್ಚುವರಿ ತಹಶೀಲ್ದಾರರು,ಮಂಜೇಶ್ವರ ತಾಲೂಕು) ರವರ ಉದ್ಘಾಟನೆಯೊಂದಿಗೆ ಕಾರ್ಯಕ್ರಮ ಜರಗಲಿದೆ. ಕಾರ್ಯಕ್ರಮದಲ್ಲಿ ರಂಗ ನಿದರ್ೆಶಕರು ಹಾಗೂ ನೀನಾಸಂ ಪದವಿಧರಾರೂ ಆದ ವೈ.ಡಿ.ಬದಾಮಿ ರವರು "ಕನ್ನಡ ರಂಗಭೂಮಿಯ ಸಮಕಾಲೀನ ಸ್ಥಿತಿಗತಿಗಳು" ಈ ವಿಷಯದ ಬಗ್ಗೆ ವಿಶೇಷೋಪನ್ಯಾಸ ಜರಗಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ"ಸೀತಾಂತರಾಳ" ಎಂಬ ಕನ್ನಡ ನಾಟಕವು ಮಂಜುಳ ಬದಾಮಿ ಮತ್ತು ಬಳಗದವರಿಂದ ಜರಗಲಿದೆ. ಅಪೂರ್ವ ಕಲಾವಿದರು, ಕಾಸರಗೋಡು ಇದರ ಅದ್ಯಕ್ಷರಾದ ಉಮೇಶ್ ಎಂ.ಸಾಲಿಯಾನ, ಹಾಗೂ ಕನ್ನಡ ಅಭಿವೃದ್ದಿ ಪ್ರಾಧಿಕಾರ, ಬೆಂಗಳೂರು ಇದರ ಕಾರ್ಯದಶರ್ಿಯಾದ ಡಾ.ಕೆ.ಮುರಳಿಧರರವರು ಸರ್ವರಿಗೂ ಸ್ವಾಗತ ಬಯಸುತ್ತಾರೆ.
keyword: kannada-chinthana-and-seethantharala-at-kasaragod




ಬೆಂಗಳೂರು ಮೇಲ್ಸೇತುವೆ ಸಂಚಾರಕ್ಕೆ ಮುಕ್ತ



ಬೆಂಗಳೂರು: (kannadaevision.in)ರಿಚ್ಮಂಡ್‌ ವೃತ್ತದ ಮೇಲ್ಸೇತುವೆಯ ಎರಡನೇ ಹಂತದ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದು, ಸೋಮವಾರದಿಂದ ವಾಹನಗಳ ಸಂಚಾರ ಆರಂಭಗೊಂಡಿದೆ. ದುರಸ್ತಿ ಕಾಮಗಾರಿ ನಡೆಸುವ ಉದ್ದೇಶದಿಂದ ಶಾಂತಿನಗರದ ಜೋಡಿ ರಸ್ತೆ ಹಾಗೂ ಮಿಷನ್‌ ರಸ್ತೆಯಿಂದ ಆರಂಭವಾಗಿ ರೆಸಿಡೆನ್ಸಿ ರಸ್ತೆಯಲ್ಲಿ ಕೊನೆಗೊಳ್ಳುವ ಮೇಲ್ಸೇತುವೆಯಲ್ಲಿ ಸೆಪ್ಟೆಂಬರ್‌ 21ರಿಂದ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿತ್ತು. ರಸ್ತೆಗೆ ಟಾರ್‌ ಶೀಟ್‌ಗಳನ್ನು ಅಳವಡಿಸಿದ ಬಳಿಕ ಡಾಂಬರು ಹಾಕಲಾಗಿದೆ. ಕಾಮಗಾರಿ ಪೂರ್ಣಗೊಂಡಿದ್ದು, ಈ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

ಗುಂಡಿ ಬಿದ್ದು ಹಾಳಾಗಿದ್ದ ರಿಚ್ಮಂಡ್‌ ಮೇಲ್ಸೇತುವೆಯ ದುರಸ್ತಿ ಕಾಮಗಾರಿಗೆ ಸೆಪ್ಟೆಂಬರ್ 1ರಂದು ಚಾಲನೆ ನೀಡಲಾಗಿತ್ತು. ಮೊದಲ ಹಂತವಾಗಿ ರಿಚ್ಮಂಡ್ ರಸ್ತೆಯಿಂದ ಆರಂಭವಾಗಿ ಜೋಡಿ ರಸ್ತೆಯಲ್ಲಿ ಕೊನೆಯಾಗುವ ಮೇಲ್ಸೇತುವೆಯ ಕಾಮಗಾರಿ ಪೂರ್ಣಗೊಳಿಸಿ ಸೆಪ್ಟೆಂಬರ್‌ 21ರಂದು ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಬಳಿಕ ಎರಡನೇ ಹಂತದ ಕಾಮಗಾರಿಗೆ ಚಾಲನೆ ನೀಡಲಾಗಿತ್ತು.

ಒಟ್ಟು ₹1.53  ಕೋಟಿ ವೆಚ್ಚದಲ್ಲಿ ದುರಸ್ತಿ ಕಾಮಗಾರಿ ನಡೆಸಿದ್ದು, 40 ದಿನಗಳೊಳಗೆ ಕಾಮಗಾರಿ ಪೂರ್ಣಗೊಳಿಸಲು ನಿರ್ಧರಿಸಲಾಗಿತ್ತು. ಆದರೆ, 32 ದಿನಗಳೊಳಗೆ ಕಾಮಗಾರಿಯನ್ನು ಮುಗಿಸಲಾಗಿದೆ. ‘ದುರಸ್ತಿ ಕಾಮಗಾರಿಯಿಂದಾಗಿ ರಿಚ್ಮಂಡ್‌ ರಸ್ತೆಯಿಂದ ಶಾಂತಿನಗರದ ಕಡೆಗೆ ಹಾಗೂ ಶಾಂತಿನಗರ ಮತ್ತು ಮಿಷನ್‌ ರಸ್ತೆ ಕಡೆಯಿಂದ ರೆಸಿಡೆನ್ಸಿ ರಸ್ತೆ ಕಡೆಗೆ ಹೋಗುವ ವಾಹನಗಳು ಕೆಳಗಿನ ರಸ್ತೆಯಲ್ಲೇ ಹಾದು ಹೋಗುತ್ತಿದ್ದವು. ಇದರಿಂದ ಸಂಚಾರ ದಟ್ಟಣೆ ಉಂಟಾಗುತ್ತಿತ್ತು. ಈಗ ಸಂಚಾರ ದಟ್ಟಣೆ ಸ್ವಲ್ಪ ಕಡಿಮೆ ಆಗಿದೆ’ ಎಂದು ಅಶೋಕ ನಗರ ಸಂಚಾರ ಠಾಣೆ ಇನ್‌ಸ್ಪೆಕ್ಟರ್‌ ಮಹಮ್ಮದ್‌ ಸಿರಾಜ್‌ ‘ಪ್ರಜಾವಾಣಿ’ಗೆ ತಿಳಿಸಿದರು.

‘ರಿಚ್ಮಂಡ್‌ ಮೇಲ್ಸೇತುವೆ ಕಾಮಗಾರಿಯನ್ನು ನಿಗದಿತ ಅವಧಿಗಿಂತ ಮುಂಚಿತವಾಗಿಯೇ ಪೂರ್ಣಗೊಳಿಸಲಾಗಿದೆ. ಆದರೆ, ರಿಚ್ಮಂಡ್‌ ರಸ್ತೆಯಲ್ಲಿ ಟೆಂಡರ್‌ ಶ್ಯೂರ್‌ ಕಾಮಗಾರಿ ನಡೆಸಲಾಗುತ್ತಿದೆ. ಈ ತಿಂಗಳಾಂತ್ಯಕ್ಕೆ ಕಾಮಗಾರಿ ಮುಗಿಯುವ ಉದ್ದೇಶವಿದೆ. ಅದು ಮುಗಿದರೆ ವಾಹನ ಸವಾರರಿಗೆ ಅನುಕೂಲವಾಗಲಿದೆ’ ಎಂದರು.
key word: bangalore-flyover-work

Monday, October 3, 2016

ದಸರಾ ಪ್ರತಿಕೃತಿಗಳೊಂದಿಗೆ ಸೆಲ್ಫಿಗೆೆ ವಿದೇಶಿ ಪ್ರಯಾಣಿಕರು ದುಂಬಾಲು ವಿಮಾನ ನಿಲ್ದಾಣದಲ್ಲಿ ದಸರಾ ಸಾಂಸ್ಕೃತಿಕ ಮೆರಗು



ದೇವನಹಳ್ಳಿ :(kannadaevision.in) ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ ವಿಶ್ವ ಭೂಪಟದಲ್ಲಿ ಗುರುತಿಸಿಕೊಂಡ ನಂತರ ಪ್ರತಿ ವರ್ಷ ನಾಡಿನ ಸಾಂಸ್ಕೃತಿಕ ಪರಂಪರೆಯೊಂದಿಗೆ ದಸರಾ ಉತ್ಸವಕ್ಕೆ ಈ ಬಾರಿ ಅದ್ದೂರಿಯಾಗಿ ಚಾಲನೆ ನೀಡಿದೆ.

ರಾಜ್ಯದೆಲ್ಲೆಡೆ ದಸರಾ ನಾಡ ಹಬ್ಬಕ್ಕೆ ಮೈಸೂರು ಸೇರಿದಂತೆ ವಿವಿಧೆಡೆ ಚಾಲನೆಯಾಗುತ್ತಿದೆ. 9 ದಿನಗಳ ಸಂಭ್ರಮದಲ್ಲಿ ಬೆಂಗಳೂರು ಮೈಸೂರು ಸೇರಿದಂತೆ ವಿವಿಧ ರಾಜ್ಯಗಳಿಗೆ ತೆರಳಲು ಬಂದು ಹೋಗುತ್ತಿರುವ ವಿದೇಶಿಯರಿಗೆ ದಸರಾ ಹಬ್ಬದ ಸ್ವಾಗತ ನೀಡಲು ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಲಾಗಿದೆ.

ಇದಕ್ಕಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೆಐಎಎಲ್ ಸಂಸ್ಥೆ ನಾಡಿನ ಇತಿಹಾಸ ಪರಂಪರೆ ಸಾರುವ ಸ್ಮಾರಕ, ಜನಪದ ನೃತ್ಯ ಪ್ರಕಾರಗಳ ಭಿತ್ತಿಚಿತ್ರಗಳಿಗೆ ದೀಪಾಲಂಕಾರ, ಲೇಸರ್‌ ಶೋ, ಅಳವಡಿಸಿದೆ. ಆ ಮೂಲಕ ದೇಶ, ವಿದೇಶಿಯರಿಗೆ ರೋಮಾಂಚನಗೊಳಿಸುತ್ತದೆ. ಇದನ್ನು ನೋಡಿದ ವಿದೇಶಿ ಪ್ರಯಾಣಿಕರು ನೃತ್ಯ ತಂಡದೊಂದಿಗೆ ಸೆಲ್ಫಿ ಛಾಯಾಚಿತ್ರಕ್ಕೆ ದುಂಬಾಲು ಬೀಳುತ್ತಿದ್ದಾರೆ.

ಎರಡು ಬಾರಿ ದೇಶದಲ್ಲೆ ಅತ್ಯುತ್ತಮ ಹಸಿರೀಕರಣ ವಿಮಾನ ನಿಲ್ದಾಣ ಪುರಸ್ಕಾರಕ್ಕೆ ಪಾತ್ರವಾಗಿರುವ ವಿಮಾನ ನಿಲ್ದಾಣ ಆವರಣದಲ್ಲಿ ಆನೆಯ ಮೇಲೆ ಅಂಬಾರಿ, ಮೈಸೂರು ಅರಮನೆಯಂತೆ  ಕಂಗೊಳಿಸುವಂತೆ ಮಾಡಿರುವ ವಿದ್ಯುತ್ ದೀಪಗಳ ಅಲಂಕಾರಗಳು ಎದ್ದು ಕಾಣುತ್ತಿವೆ.

ದತ್ತಣ್ಣ ಚಾಲನೆ:  ಚಿತ್ರನಟ ದತ್ತಣ್ಣ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು, ಜಿಲ್ಲಾಧಿಕಾರಿ ಪಾಲಯ್ಯ, ಕೆಐಎಎಲ್ ಸಂಸ್ಥೆ ನಿರ್ದೇಶಕ ಭಾಸ್ಕರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
Keyword: dasara-celebration-airport

ವಿಧಾನ ಸಭೆ ವಿಶೇಷ ಅಧಿವೇಶನ ಆರಂಭ ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಆದೇಶದ ಮರು ಪರಿಶೀಲನೆಗೆ ಕೇಂದ್ರದ ಅರ್ಜಿ

ಬೆಂಗಳೂರು: (kannadaevision.in)ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆ ಸಂಬಂಧಿಸಿದಂತೆ ಆದೇಶ ಮರು ಪರಿಶೀಲನೆ ಕೋರಿ ಅಟಾರ್ನಿ ಜನರಲ್ ಸುಪ್ರೀಂ ಕೋರ್ಟ್‌ಗೆ  ಮನವಿ ಮಾಡಿದ್ದಾರೆ.
ಅಕ್ಟೋಬರ್ 4ರೊಳಗೆ ಕಾವೇರಿ ನಿರ್ವಹಣಾ  ಮಂಡಳಿ ರಚಿಸುವಂತೆ ಸುಪ್ರೀಂ ಕೋರ್ಟ್ ಸೆಪ್ಟೆಂಬರ್‌ 30ರಂದು ನೀಡಿದ್ದ ಆದೇಶಕ್ಕೆ ಆಟಾರ್ನಿ ಜನರಲ್‌ ಮುಕುಲ್ ರೋಹ್ಟಗಿ ಒಪ್ಪಿಗೆ ಸೂಚಿಸಿದ್ದರು. ಇದೀಗ ಆದೇಶ ಮರು ಪರಿಶೀಲಿಸುವಂತೆ ಕೋರಿ ಕೇಂದ್ರ ಸರ್ಕಾರದಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ.

ಅಟಾರ್ನಿ ಜನರಲ್‌ ನೀಡಿರುವ ಅರ್ಜಿ ವಿಚಾರಣೆಯನ್ನು ಮಂಗಳವಾರ ನಡೆಸುವುದಾಗಿ ಸುಪ್ರೀಂ ಕೋರ್ಟ್‌ ನಿಗದಿ ಪಡಿಸಿದೆ. ಶಾಸನ ಸಭೆ ರಚನೆ ಸಂಸತ್ತಿನ ಜವಾಬ್ದಾರಿಯಾಗಿದೆ ಎನ್ನುವ ಕಾರಣ ನೀಡಲಾಗಿದೆ.

ವಿಧಾನಸಭೆ ವಿಶೇಷ ಅಧಿವೇಶನ
ಕಾವೇರಿ ನೀರು ಹಂಚಿಕೆ ಕುರಿತಾದ ಚರ್ಚೆಗಾಗಿ ರಾಜ್ಯ ವಿಧಾನ ಮಂಡಲದ ವಿಶೇಷ ಅಧಿವೇಶನ ಆರಂಭವಾಗಿದೆ. ಅಧಿವೇಶನವಲ್ಲಿ ಚರ್ಚೆಯಾಗಲಿರುವ ವಿಷಯ ಸೇರಿದಂತೆ ಸೆ.30ರಂದು ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವನ್ನು ಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಸದನದಲ್ಲಿ ಓದಿ ತಿಳಿಸಿದರು.

ಕಾವೇರಿ ನೀರು ನಿರ್ವಹಣಾ ಮಂಡಳಿ ರಚೆನೆ ಹಾಗೂ ಅಕ್ಟೋಬರ್ 6ರವರೆಗೂ 36 ಸಾವಿರ ಕ್ಯೂಸೆಕ್‌ ನೀರು ಹರಿಸಲು ಸುಪ್ರೀಂ ಕೋರ್ಟ್ ಆದೇಶಿಸಿದೆ.
*
ಇಡೀ ಸದನ ಪಕ್ಷ ಭೇದ ಮರೆತು ಎಚ್‌.ಡಿ.ದೇವೇಗೌಡರಿಗೆ ಋಣಿಯಾಗಿದೆ. ಪ್ರಧಾನಿ ನರೇಂದ್ರ ಮೋದಿಯವರಿಗೂ ಧನ್ಯವಾದ...ಈ ನಾಯಕರನ್ನು ಒಂದು ಪಕ್ಷಕ್ಕೆ ಸೀಮಿತಗೊಳಿಸಬಾರದು.
–ರಮೇಶ್ ಕುಮಾರ್‌, ಸಚಿವ
keyword: kaveri-water-problem

Saturday, October 1, 2016

ಕಾವೇರಿ ವಿವಾದ: ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಸಿಎಂ

ಮೈಸೂರು:(kannadaevision.in) ತಮಿಳುನಾಡಿಗೆ ಮತ್ತೆ 32 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಇಂದು ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ನೀಡಿದ ನಂತರ ಸಮಾರಂಭದಲ್ಲಿ ಮಾತನಾಡಿದ ಸಿಎಂ, ನಮ್ಮ ಜಲಾಶಯಗಳಲ್ಲಿ ನೀರಿಲ್ಲ. ಹೀಗಾಗಿ ಸೆಪ್ಟೆಂಬರ್ 27ರ ಆದೇಶವನ್ನು ನಾವು ಪಾಲಿಸಲಿಲ್ಲ. ಈಗ ಮತ್ತೆ 6 ದಿನ ನೀರು ಬಿಡುವಂತೆ ಕೋರ್ಟ್ ಆದೇಶಿಸಿರುವುದರಿಂದ ರಾಜ್ಯದಲ್ಲಿ ಬಿಕ್ಕಟ್ಟು ಸೃಷ್ಟಿಯಾಗಿದೆ. ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಪದೇಪದೆ ಅನ್ಯಾಯವಾಗುತ್ತಿದೆ ಎಂದು ತೀವ್ರ ಬೇಸರ ವ್ಯಕ್ತಪಡಿಸಿದರು. 
ನಮಗೆ ಕುಡಿಯಲು ನೀರಿಲ್ಲ. ಆದರೆ ತಮಿಳುನಾಡು ಬೆಳೆಗಳಿಗೆ ನೀರು ಕೇಳುತ್ತಿದೆ. ನಮ್ಮ ರಾಜ್ಯದಲ್ಲಿ ಯಾವುದೇ ಮಳೆ ಮಾರುತಗಳಿಲ್ಲ. ಆದರೆ ತಮಿಳುನಾಡಿನಲ್ಲಿ ಇನ್ನೂ ಮಳೆ ಮಾರುತಗಳಿವೆ ಎಂದರು.
ಇದೇ ವೇಳೆ ಕಾವೇರಿ ಬಿಕ್ಕಟ್ಟು ಬಗೆಹರಿಯಲಿ, ರಾಜ್ಯಕ್ಕೆ ನ್ಯಾಯ ಸಿಗಲಿ ಎಂದು ನಾಡದೇವತೆ ಚಾಮುಂಡೇಶ್ವರಿ ಬಳಿ ಪ್ರಾರ್ಥನೆ ಮಾಡಿರುವುದಾಗಿ ಸಿಎಂ ತಿಳಿಸಿದರು,
ನಿನ್ನೆ ಸುಪ್ರೀಂ ಕೋರ್ಟ್ ಇಂದಿನಿಂದ ಮತ್ತೆ 6 ದಿನ ನಿತ್ಯ 6 ಸಾವಿರ ಕ್ಯೂಸೆಕ್ ನಂತೆ ಒಟ್ಟು 36 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಬಿಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಆದರೆ ತಮಿಳುನಾಡಿಗೆ ನೀರು ಬಿಡುವ ಬಗ್ಗೆ ಸಿಎಂ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಈ ಕುರಿತು ಚರ್ಚಿಸಲು ಇಂದು ಮಧ್ಯಾಹ್ನ ಸರ್ವಪಕ್ಷ ಸಭೆ ಕರೆದಿದ್ದು, ಸಭೆಯ ಬಳಿಕ ಸಂಜೆ 6 ಗಂಟೆ ಸಂಪುಟ ಸಭೆ ನಡೆಸಿ ಅಂತಿಮ ನಿರ್ಧಾರ ಪ್ರಕಟಿಸಲಿದ್ದಾರೆ.
keyword: mysuru-dasara -inauguration

ಅತ್ತಿಬೆಲೆ ಗಡಿವರೆಗೆ ಮಾತ್ರ ಬಸ್‌



ಆನೇಕಲ್‌:(kannadaevision.in)ತಮಿಳುನಾಡಿಗೆ ಅಕ್ಟೋಬರ್ 1ರಿಂದ 6ರವರೆಗೆ ಆರು ಸಾವಿರ ಕ್ಯುಸೆಕ್‌  ಕಾವೇರಿ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದ ಕಾರಣ ಕರ್ನಾಟಕದ ಗಡಿಭಾಗ ಅತ್ತಿಬೆಲೆಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಗಡಿಯಲ್ಲಿ ಭದ್ರತೆಯನ್ನು ಪೊಲೀಸರು ಬಿಗಿಗೊಳಿಸಿದ್ದಾರೆ. ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಿದ್ದಾರೆ. ಮೀಸಲು ಪಡೆ ಹಾಗೂ ಕ್ಷಿಪ್ರ ಕಾರ್ಯ ಪಡೆ ಗಡಿಯಲ್ಲಿ ಬೀಡು ಬಿಟ್ಟಿದೆ. ಡಿವೈಎಸ್ಪಿ ಎಸ್.ಕೆ.ಉಮೇಶ್ ಅವರ ನೇತೃತ್ವದಲ್ಲಿ ತಮ್ಮನ್ನು ಭದ್ರತಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿಯುದ್ದಕ್ಕೂ ಕಟ್ಟೆಚ್ಚರ ವಹಿಸಲಾಗಿದೆ. ಕರ್ನಾಟಕ ಮತ್ತು ತಮಿಳುನಾಡು ಸಾರಿಗೆ ಸಂಸ್ಥೆಯ ಬಸ್ಸುಗಳು ತಮ್ಮ ರಾಜ್ಯಗಳ ಗಡಿಭಾಗದವರೆಗೆ ಸಂಚರಿಸಿ ಪ್ರಯಾಣಿಕರನ್ನು ಇಳಿಸಿದ ನಂತರ ಪ್ರಯಾಣಿಕರ ಪ್ರಯಾಣಕ್ಕೆ ಅನುವು ಮಾಡಿಕೊಡುತ್ತಿದ್ದಾರೆ.
keyword: bangalore-kaveri-water-prblm