Friday, September 30, 2016

ದಲಿತರ ಕಲ್ಯಾಣ ಕಾರ್ಯಕ್ರಮಕ್ಕೆ ₹ 20 ಸಾವಿರ ಕೋಟಿ ಅನುದಾನ 259 ದಲಿತ ಕುಟುಂಬಗಳಿಗೆ ನಿವೇಶನದ ಹಕ್ಕುಪತ್ರ



ಬೆಂಗಳೂರು:(kannadaevision.in) ಯಲಹಂಕದ ಅಂಬೇಡ್ಕರ್‌ ನಗರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ 259 ದಲಿತ ಕುಟುಂಬಗಳಿಗೆ ನಿವೇಶನದ ಹಕ್ಕುಪತ್ರಗಳನ್ನು ವಿತರಿಸಲಾಯಿತು.

ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್‌ ಮಾತನಾಡಿ, ‘ದಲಿತರ ಕಲ್ಯಾಣ ಕಾರ್ಯಕ್ರಮಗಳಿಗಾಗಿ ಸರ್ಕಾರ ಪ್ರತಿವರ್ಷ ₹20 ಸಾವಿರ ಕೋಟಿ ಅನುದಾನ ಒದಗಿಸುತ್ತಿದೆ. ನಗರದ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ರೂಪಿಸಲಾಗುತ್ತಿದೆ’ ಎಂದರು.

ಲೋಕೋಪಯೋಗಿ ಸಚಿವ ಎಚ್‌.ಸಿ. ಮಹದೇವಪ್ಪ ಅವರು, ‘ಈ ಪ್ರದೇಶದಲ್ಲಿ 60 ವರ್ಷಗಳಿಂದ ದಲಿತರು ವಾಸ ಮಾಡುತ್ತಿದ್ದಾರೆ. ಯಾವಾಗ ಗುಡಿಸಿಲುಗಳನ್ನು ತೆರವು ಮಾಡುತ್ತಾರೋ ಎಂಬ ಆತಂಕದಲ್ಲೇ ಬದುಕುತ್ತಿದ್ದರು. ಆದರೆ, ಈಗ ನಿರಾತಂಕವಾಗಿ ವಾಸಮಾಡಬಹುದು’ ಎಂದು ಹೇಳಿದರು.

ಸಮಾಜ ಕಲ್ಯಾಣ ಸಚಿವ ಎಚ್‌. ಆಂಜನೇಯ ಅವರು, ‘ಮನೆ, ಕಟ್ಟಡಗಳ ನಿರ್ಮಾಣ ಕಾರ್ಯದಲ್ಲಿ ತೊಡಗುವ ಕಾರ್ಮಿಕರು ಸ್ವಂತ ಸೂರಿನಲ್ಲಿ ವಾಸ ಮಾಡಬೇಕೆಂಬ ಉದ್ದೇಶದಿಂದ ನಿವೇಶನದ ಹಕ್ಕುಪತ್ರಗಳನ್ನು ವಿತರಿಸಲಾಗಿದೆ’ ಎಂದರು. ಮೇಯರ್‌ ಜಿ.ಪದ್ಮಾವತಿ ಮಾತನಾಡಿ, ‘ಮೇಯರ್‌ ಆಗಿ ಪ್ರಮಾಣವಚನ ಸ್ವೀಕರಿಸಿ ಭಾಗವಹಿಸಿದ ಮೊದಲ ಕಾರ್ಯಕ್ರಮವಿದು. ಹಕ್ಕುಪತ್ರಗಳನ್ನು ಜೋಪಾನವಾಗಿ ಇಟ್ಟುಕೊಳ್ಳಬೇಕು’ ಎಂದು ಹೇಳಿದರು.

ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ
‘ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಹೈಕೋರ್ಟ್‌ ನಿರ್ದೇಶನದ ಮೇರೆಗೆ ಸಿಐಡಿ ಅಧಿಕಾರಿಗಳು ತನಿಖೆ ನಡೆಸಿ, ನ್ಯಾಯಾಲಯಕ್ಕೆ ಬಿ ರಿಪೋರ್ಟ್‌ ಸಲ್ಲಿಸಿದ್ದಾರೆ. ಹೀಗಾಗಿ ನಾನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆಗೊಂಡಿದ್ದೇನೆ’ ಎಂದು ಕೆ.ಜೆ.ಜಾರ್ಜ್‌ ಹೇಳಿದರು.

keyword: yallahanka-dalith-property-paper


No comments:

Post a Comment