Tuesday, October 4, 2016

ದಸರಾ ಹಬ್ಬದ ಪ್ರಯುಕ್ತ ಕೆಎಸ್ಆರ್ಟಿಸಿ ಸೌಲಭ್ಯ ಪ್ರವಾಸಿಗರಿಗೆ ವಿಶೇಷ ಸಾರಿಗೆ

ಬೆಂಗಳೂರು: (kannadaevision.in)ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ದಸರಾ ಮಹೋತ್ಸವದ ಅಂಗವಾಗಿ ರಾಜ್ಯದ ಹಾಗೂ ದೇಶದ ವಿವಿಧ ಕಡೆಗಳಿಂದ ದಸರಾ ವೀಕ್ಷಣೆಗೆ ಮೈಸೂರು ನಗರಕ್ಕೆ ಬರುವ ಪ್ರವಾಸಿಗರಿಗೆ ಹೆಚ್ಚುವರಿ ಬಸ್ಸುಗಳನ್ನು ಒಳಗೊಂಡ  ವಿಶೇಷ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ.


ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್‌ 7ರಿಂದ 10ರವರೆಗೆ ಬೆಂಗಳೂರಿನಿಂದ ರಾಜ್ಯದ ಮತ್ತು ಅಂತರ ರಾಜ್ಯದ ವಿವಿಧ ಸ್ಥಳಗಳಿಗೆ 1500ಕ್ಕೂ ಹೆಚ್ಚು ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.


ರಾಜ್ಯದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ಮಂಗಳೂರು, ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಕಾರವಾರ, ಬಳ್ಳಾರಿ, ಹೊಸಪೇಟೆ, ಕಲಬುರ್ಗಿ, ರಾಯಚೂರು ಮುಂತಾದ ಸ್ಥಳಗಳಿಗೆ ಹಾಗೂ ನೆರೆ ರಾಜ್ಯಗಳಲ್ಲಿನ ಹೈದರಾಬಾದ್, ಚೆನ್ನೈ, ಊಟಿ, ಕೊಡೈಕೆನಾಲ್, ಸೇಲಂ, ತಿರುಚಿನಾಪಳ್ಳಿ, ಮಧುರೈ, ತಿರುಚಿ, ಪಣಜಿ, ಶಿರಡಿ, ಮುಂಬೈ, ಎರ್ನಾಕುಲಂ, ಪಾಲ್ಗಾಟ್, ತಿರುವನಂತಪುರ ಸ್ಥಳಗಳಿಗೆ ವಿಶೇಷ ಬಸ್ಸುಗಳು ಸಂಚರಿಸುತ್ತವೆ.


ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನ ಕಾಯ್ದಿರಿಸುವ ಸೌಲಭ್ಯ ಕಲ್ಪಿಸಲಾಗಿದೆ. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್‌ ಕಾಯ್ದಿರಿಸಿದಲ್ಲಿ ಶೇ 5ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್‌ ಒಟ್ಟಿಗೆ ಕಾಯ್ದಿರಿಸಿದರೆ ಪ್ರಯಾಣ ದರದಲ್ಲಿ ಶೇ 10ರಷ್ಟು ರಿಯಾಯಿತಿ ನೀಡಲಾಗುವುದು.


ಸಂಚಾರ ಮಾಡುವ ಹೆಚ್ಚುವರಿ ಬಸ್‌ಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ನಿಗಮದ ವೆಬ್‌ಸೈಟ್‌ನಲ್ಲಿ ಒದಗಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಮೈಸೂರು ಸುತ್ತಾಟಕ್ಕೆ ‘ದರ್ಶಿನಿ’
ಮೈಸೂರಿಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ ಒದಗಿಸಿರುವ ವಿಶೇಷ ಬಸ್‌ಗಳ ವ್ಯವಸ್ಥೆ ಹೀಗಿದೆ. 

ಗಿರಿದರ್ಶಿನಿ:  ಬಂಡೀಪುರ, ಗೋಪಾಲಸ್ವಾಮಿ ಬೆಟ್ಟ, ಬಿಳಿಗಿರಿರಂಗನ ಬೆಟ್ಟ, ನಂಜನಗೂಡು ಮತ್ತು ಚಾಮುಂಡಿ ಬೆಟ್ಟಕ್ಕೆ ಪ್ರಯಾಣ ದರ ವಯಸ್ಕರಿಗೆ ₹350, ಮಕ್ಕಳಿಗೆ ₹175 ದರ ನಿಗದಿಪಡಿಸಲಾಗಿದೆ.


ಜಲದರ್ಶಿನಿ:  ಗೋಲ್ಡನ್‌ಟೆಂಪಲ್ (ಬೈಲಕುಪ್ಪೆ), ದುಬಾರೆ ಅರಣ್ಯ ನಿಸರ್ಗಧಾಮ, ರಾಜಾಸೀಟ್, ಹಾರಂಗಿ ಜಲಾಶಯ ಹಾಗೂ ಕೆ.ಆರ್.ಎಸ್.ಗೆ ಪ್ರಯಾಣ ದರ ವಯಸ್ಕರಿಗೆ ₹375 ಮತ್ತು ಮಕ್ಕಳಿಗೆ ₹190 ದರ ನಿಗದಿಪಡಿಸಲಾಗಿದೆ.


ದೇವದರ್ಶಿನಿ: ನಂಜನಗೂಡು, ಮುಡುಕುತೊರೆ, ತಲಕಾಡು, ಸೋಮನಾಥಪುರ, ಶ್ರೀರಂಗಪಟ್ಟಣ (ಪ್ರಯಾಣದರ ವಯಸ್ಕರಿಗೆ ₹275, ಮಕ್ಕಳಿಗೆ ₹140 ದರವನ್ನು ನಿಗದಿಪಡಿಸಲಾಗಿದೆ. ಈ ಬಸ್ಸುಗಳು ಬೆಳಿಗ್ಗೆ ಮೈಸೂರಿನಿಂದ ಹೊರಟು ಮೇಲ್ಕಂಡ ವಿವಿಧ ಸ್ಥಳಗಳನ್ನು ಸಂದರ್ಶಿಸಿದ ನಂತರ ಸಾಯಂಕಾಲ ಮೈಸೂರಿಗೆ ವಾಪಸ್ಸಾಗುತ್ತವೆ.
keyword: mysore-dasara-special-bus-service

No comments:

Post a Comment